ರಣಬೇಟೆ ನ್ಯೂಸ್ ಕೂಕನೂರ.
ಇತ್ತೀಚಿನ ಆಧುನಿಕ ದಿನಗಳಲ್ಲಿ ಪ್ರತಿಯೊಂದು ರಂಗವು ಸ್ಪರ್ಧಾತ್ಮಕವಾಗಿ ಕೂಡಿದ್ದು ನಮ್ಮ ವಿದ್ಯಾರ್ಥಿಗಳಿಗೆ ಗುಣಾತ್ಮಕ ಶಿಕ್ಷಣವನ್ನು ನೀಡುವುದರೊಂದಿಗೆ ಭವಿಷ್ಯದ ದಿನಗಳಿಗೆ ಸಮರ್ಥರನ್ನಾಗಿಸಿ ಸದೃಢಗಳಿಸೋಣ ಎಂದು ಮುಖ್ಯೋಪಾಧ್ಯಾಯ ಶಿವಪ್ಪ ಇಬೇರಿ ಹೇಳಿದರು ಪಟ್ಟಣದ ಡಾಕ್ಟರ್ ಬಾಬಾ ಸಾಹೇಬ್ ಅಂಬೇಡ್ಕರ್ ನಗರದಲ್ಲಿರುವ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಮಕ್ಕಳಿಗೆ ಸಮವಸ್ತ್ರ ಹಾಗೂ ಪಠ್ಯಪುಸ್ತಕ ವಿತರಣೆ ಸಂದರ್ಭದಲ್ಲಿ ಮುಖ್ಯೋಪಾಧ್ಯಾಯ ಶಿವಪ್ಪ ಮಾತನಾಡುತ್ತ ಇಂದಿನ ವಿದ್ಯಾರ್ಥಿಗಳು ಪ್ರತಿಯೊಂದು ಹಂತದಲ್ಲಿ ಸ್ಪರ್ಧಾತ್ಮಕ ಎದುರಾಳಿಗಳನ್ನು ಎದುರಿಸಿ ಮುಂದಿನ ಶಿಕ್ಷಣಕ್ಕೆ ಪಾದರ್ಪಣೆ ಮಾಡುವ ಅನಿವಾರ್ಯತೆ ಎದುರಾಗುತ್ತಿದ್ದು ಭವಿಷ್ಯದ ದಿನಗಳಿಗೆ ಸಮರ್ಥರಾಗುವಂತೆ ಶಿಕ್ಷಣ ನೀಡಿ ನಮ್ಮ ವಿದ್ಯಾರ್ಥಿಗಳನ್ನು ಸದೃಢಗೊಳಿಸೋಣ ಎಂದು ಮುಖ್ಯೋಪಾಧ್ಯಾಯರು ಶಿಕ್ಷಕರಿಗೆ ಕರೆ ನೀಡಿದರು. ಶಾಲಾ ಸುಧಾರಣಾ ಸಮಿತಿ ಅಧ್ಯಕ್ಷ ಲಕ್ಷ್ಮಣ ಕಾಳಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಸರ್ಕಾರಿ ಶಾಲೆಗಳಲ್ಲಿ ಅನೇಕ ಸೌಲಭ್ಯಗಳನ್ನು ನೀಡುತ್ತಿದ್ದು ಅವುಗಳನ್ನು ಪಾಲಕರು ಸದುಪಯೋಗ ಪಡಿಸಿಕೊಳ್ಳಬೇಕು ಹಾಗೂ ಖಾಸಗಿ ಶಾಲೆಗಳ ವ್ಯಾಮೋಹಕ್ಕೆ ಒಳಗಾಗದೆ ಉನ್ನತ ಗುಣಮಟ್ಟದ ಶಿಕ್ಷಕರನ್ನು ಹೊಂದಿರುವ ಸರ್ಕಾರಿ ಶಾಲೆಯಲ್ಲಿ ತಮ್ಮ ಮಕ್ಕಳನ್ನು ದಾಖಲಿಸಬೇಕು ಎಂದು ಹೇಳಿದರು. ಈ ಸಂದರ್ಭದಲ್ಲಿ ಶಾಲಾ ಸುಧಾರಣಾ ಸಮಿತಿ ಸದಸ್ಯರು, ಶಿಕ್ಷಕರಾದ ಅವದೂತ ಆಶ್ರತ, ರತ್ನವ್ವ ಮಾಲಿ ಹಾಗೂ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು