ರಣಬೇಟೆ ನ್ಯೂಸ್ ಕೊಪ್ಪಳ
ರಾಯಚೂರು, ಬಳ್ಳಾರಿ, ಕೊಪ್ಪಳ ಹಾಗೂ ವಿಜಯನಗರ(ರಾಬಕೊವಿ) ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ ಅಧ್ಯಕ್ಷ ಸ್ಥಾನಕ್ಕೆ ಕೊಪ್ಪಳ ವಿಧಾನಸಭಾ ಕ್ಷೇತ್ರದ ಶಾಸಕ ರಾಘವೇಂದ್ರ ಹಿಟ್ನಾಳ, ಹಾಗೂ ಉಪಾಧ್ಯಕ್ಷರಾಗಿ ಗಂಗಾವತಿಯ ಎನ್ ಸತ್ಯನಾರಾಯಣ ಅವಿರೋಧವಾಗಿ ಆಯ್ಕೆಯಾಗಿರುತ್ತಾರೆ. ಈ ವೇಳೆಯಲ್ಲಿ ವರದಿಗಾರರ ಜೊತೆ ರಾಘವೇಂದ್ರ ಹಿಟ್ನಾಳ ಮಾತನಾಡುತ್ತಾ ನಾಡಿನ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿಗಳಾದ ಡಿಕೆ ಶಿವಕುಮಾರ್ ಅವರ ಸಹಕಾರದ ಜೊತೆ ರಾಯಚೂರು,ಬಳ್ಳಾರಿ, ಕೊಪ್ಪಳ ವಿಜಯನಗರ ಜಿಲ್ಲೆಗಳ ಉಸ್ತುವಾರಿ ಸಚಿವರು ಎಲ್ಲಾ ಜನಪ್ರತಿನಿಧಿಗಳು ಹಾಗೂ ನಿರ್ದೇಶಕರ ಸಹಕಾರದಿಂದ ಈ ಸ್ಥಾನ ತಮಗೆಲ್ಲ ಬೀಸಿದ್ದು ಎಲ್ಲರಿಗೆ ಕೃತಜ್ಞತೆ ಅರ್ಪಿಸುವುದಾಗಿ ತಿಳಿಸಿದರು ಜೊತೆಗೆ ನನಗೆ ನೀಡಿರುವ ಈ ಜವಾಬ್ದಾರಿಯನ್ನು ಅತ್ಯಂತ ಯಶಸ್ವಿಯಾಗಿ ಕಾರ್ಯನಿರ್ವಹಿಸುವ ಉದ್ದೇಶವನ್ನು ಹೊಂದಿದ್ದು ರೈತರೇ ಜೀವಾಳವಾಗಿರುವ ಈ ಒಕ್ಕೂಟದಿಂದ ರೈತರಿಗೆ ಎಲ್ಲಾ ರೀತಿಯ ಸೌಲಭ್ಯ ಒದಗಿಸುವ ಉದ್ದೇಶವನ್ನು ಹೊಂದಿದ್ದು ಜೊತೆಗೆ ಆಮೆಗತೆಯಲ್ಲಿ ಸಾಗಿರುವ ಮೆಗಾ ಡೈರಿ ಕಾರ್ಯವನ್ನು ಶೀಘ್ರದಲ್ಲಿ ತೆಗೆದ್ಕೊಂಡು ಆದಷ್ಟು ಬೇಗನೆ ಲೋಕಾರ್ಪಣೆಗೊಳಿಸುವುದಾಗಿ ತಿಳಿಸಿದರು.
