ತುಂಗಭದ್ರಾ ನದಿಗೆ ಸಚಿವ, ಸಂಸದ, ಶಾಸಕರಿಂದ ಬಾಗಿನ ಸಮರ್ಪಣೆ
ರಣಬೇಟೆ ನ್ಯೂಸ್ ಕೊಪ್ಪಳ.ಆ. 27: ಜಿಲ್ಲೆಯ ಸುಪ್ರಸಿದ್ಧ ಧಾರ್ಮಿಕ ಕ್ಷೇತ್ರ ಶ್ರೀ ಹುಲಿಗೆಮ್ಮ ದೇವಿ ಕ್ಷೇತ್ರದಲ್ಲಿ ಮಂಗಳವಾರ ಸಂಜೆ ನಡೆದ ತುಂಗಾರತಿ ಮಹೋತ್ಸವವು ವಿಜೃಂಭಣೆಯಿಂದ ಜರುಗಿತು.
ಹಿಂದೂ ಧಾರ್ಮಿಕ ದತ್ತಿ ಇಲಾಖೆ, ಕೊಪ್ಪಳ ಜಿಲ್ಲಾಡಳಿತ ಹಾಗೂ ಹುಲಿಗಿ ಗ್ರಾಮದ ಶ್ರೀ ಹುಲಿಗೆಮ್ಮ ದೇವಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಇದೇ ಪ್ರಥಮ ಬಾರಿಗೆ ಶ್ರೀ ಹುಲಿಗೆಮ್ಮ ದೇವಿ ಕ್ಷೇತ್ರದ ತುಂಗಭದ್ರಾ ನದಿತೀರದಲ್ಲಿ ತುಂಗಭದ್ರ ಆರತಿ ಮಹೋತ್ಸವ ಕಾರ್ಯಕ್ರಮವನ್ನು ಪವಿತ್ರ ತೀರ್ಥ ಕ್ಷೇತ್ರ ಕಾಶಿಯಲ್ಲಿ ನಡೆಯುವ ಗಂಗಾ ಆರತಿ ಮಾದರಿಯಲ್ಲಿ ಹಮ್ಮಿಕೊಳ್ಳಲಾಗಿತ್ತು. ಗಂಗಾ ಆರತಿಯ 15 ಅರ್ಚಕರು ಈ ತುಂಗಭದ್ರಾ ಆರತಿ ಮಹೋತ್ಸವವನ್ನು ನೆರವೇರಿಸಿದರು.
ಈ ಕಾರ್ಯಕ್ರಮ ವಾರಣಾಸಿಯ ಗಂಗಾರತಿಯನ್ನು ನೆನಪಿಸುವಂತಿತ್ತು. ತುಂಗಭದ್ರಾ ಆರತಿಗಾಗಿ ಸಾರ್ವಜನಿಕರಿಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ಶ್ರೀ ಕ್ಷೇತ್ರದ ವತಿಯಿಂದ ಸುಮಾರು ಎರಡು ಸಾವಿರ ಆರತಿಗಳನ್ನು ಭಕ್ತಾದಿಗಳಿಗೆ ಉಚಿತವಾಗಿ ನೀಡಲಾಗಿತ್ತು. ತುಂಗಾರತಿಗೂ ಮುನ್ನ ಸಾರಿಗೆ ಮತ್ತು ಮುಜರಾಯಿ ಇಲಾಖೆಯ ಸಚಿವರು ಹಾಗೂ ಶ್ರೀ ಹುಲಿಗೆಮ್ಮ ದೇವಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ರಾಮಲಿಂಗಾರೆಡ್ಡಿ ಮತ್ತು ಶ್ರೀ ಹುಲಿಗೆಮ್ಮ ದೇವಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಉಪಾಧ್ಯಕ್ಷ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ ತಂಗಡಗಿ ಶಿವರಾಜ ಹಾಗೂ ರಾ.ಬ.ಕೊ.ವಿ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಮತ್ತು ಕೊಪ್ಪಳ ಶಾಸಕ ಕೆ.ರಾಘವೇಂದ್ರ ಹಿಟ್ನಾಳ ಹಾಗೂ ಸಂಸದ ಕೆ.ರಾಜಶೇಖರ ಹಿಟ್ನಾಳ ಮತ್ತು ವಿಧಾನ ಪರಿಷತ್ ಸದಸ್ಯ ಹೇಮಲತಾ ನಾಯಕ ಹಾಗೂ ಇತರೆ ಜನಪ್ರತಿನಿಧಿಗಳು ತುಂಗಭದ್ರಾ ನದಿಗೆ ಬಾಗಿನ ಸಮರ್ಪಣೆ ಮಾಡಿದರು.

ತುಂಗಭದ್ರಾ ಆರತಿ ಮಹೋತ್ಸವದ ಪ್ರಯುಕ್ತ ಚಂಡಿಕಾ ಹೋಮ, ಭಕ್ತರಿಗೆ ವಿಶೇಷ ಅನ್ನ ಸಂತರ್ಪಣೆ ಕಾರ್ಯಕ್ರಮ, ಮಾಹಿಳೆಯರಿಂದ ವಿಶೇಷ ಕುಂಭ ಮೆರವಣಿಗೆ, ನದಿತೀರದಲ್ಲಿ ದೇವಸ್ಥಾನದ ಉತ್ಸವ ಮೂರ್ತಿಯ ಪ್ರತಿಷ್ಠಾಪನೆ ಮತ್ತು ವಿಶೇಷ ಪೂಜೆ ನಡೆಯಿತು. ಇದಲ್ಲದೆ ಮಹಿಳೆಯರಿಗೆ ಉಡಿ ತುಂಬುವ ಕಾರ್ಯಕ್ರಮ, ಹೊಸಪೇಟೆಯ ಅಂಜಲಿ ಕಲಾ ತಂಡದವರಿಂದ ಭರತನಾಟ್ಯ ಹಾಗೂ ನದಿ ತಟದ ವೇದಿಕೆಯಲ್ಲಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.
ಕಾರ್ಯಕ್ರಮದಲ್ಲಿ ಪಂಚಮಸಾಲಿ ಜಗದ್ಗುರು ಪೀಠ ಹರಿಹರದ ವಚನಾನಂದ ಸ್ವಾಮಿಗಳು ಹಾಗೂ ವಿವಿಧ ಮಠಾಧೀಶರು, ಮಾಜಿ ಸಂಸದ ಕರಡಿ ಸಂಗಣ್ಣ, ಮಾಜಿ ಶಾಸಕ ಕೆ.ಬಸವರಾಜ ಹಿಟ್ನಾಳ ಹಾಗೂ ಅಮರೆಗೌಡ ಪಾಟೀಲ ಭಯ್ಯಾಪುರ, ಮುನಿರಾಬಾದ್ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರ ತುಂಗಭದ್ರಾ ಯೋಜನೆಯ ಅಧ್ಯಕ್ಷ ಹಸನಸಾಬ ನಭಿಸಾಬ್ ದೋಟಿಹಾಳ, ಹುಲಿಗಿ ಗ್ರಾಮ ಪಂಚಾಯತ್ ಅಧ್ಯಕ್ಷ ನೀಲಮ್ಮ ಗವಿಸಿದ್ದಪ್ಪ ಗುಂಗಾಡಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವರ್ಣಿತ್ ನೆಗೀ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ರಾಮ್ ಎಲ್. ಅರಸಿದ್ದಿ, ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ, ಕ್ಯಾಪ್ಟನ್ ಮಹೇಶ ಮಾಲಗಿತ್ತಿ, ತಹಶಿಲ್ದಾರ ವಿಠ್ಠಲ ಚೌಗಲಾ ಹಾಗೂ ಶ್ರೀ ಹುಲಿಗೆಮ್ಮ ದೇವಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಯಂ.ಹೆಚ್. ಪ್ರಕಾಶ್ ರಾವ್, ಶ್ರೀ ಹುಲಿಗೆಮ್ಮ ದೇವಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಸದಸ್ಯರು ಸೇರಿದಂತೆ ಇತರೆ ಹಲವಾರು ಜನಪ್ರತಿನಿಧಿಗಳು, ಶ್ರೀ ಹುಲಿಗೆಮ್ಮ ದೇವಿಯ ಅಪಾರ ಸಂಖ್ಯೆಯ ಭಕ್ತಾದಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದ